ಉಳ್ಳಾಲ: ಹೆದ್ದಾರಿಯಲ್ಲಿ ಕಾಮಗಾರಿ ನಿರತವಾಗಿದ್ದ ಟ್ರ್ಯಾಕ್ಟರ್‍ವೊಂದಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ರರ್ ಚಾಲಕ ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಲ್ಲಪು ಬಳಿ ಗುರುವಾರ ತಡರಾತ್ರಿ ನಡೆದಿದೆ. ಗಾಯಗೊಂಡ ಚಾಲಕನನ್ನು ಹನುಮಂತ ಎಂದು ಗುರುತಿಸಲಾಗಿದೆ.
ಘಟನೆಯ ವಿವರ: ಗುರುವಾರ ಹೆದ್ದಾರಿ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯ ನಡೆಯುತ್ತಿತ್ತು ಕಾರ್ಮಿಕರು ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್‍ನ್ನು ವಿಭಾಜಕದ ಪಕ್ಕ ನಿಲ್ಲಿಸಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಹಿಂಬದಿಯಿಂದ ಬಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡರು. ಗಾಯಾಳು ಚಾಲಕ ಹನುಮಂತ ಎಂಬವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

