ಮೂಡುಬಿದಿರೆ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು, ದ.ಕ ಜಿಲ್ಲಾ ಸಹಕಾರಿ ಯೂನಿಯನ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕಲ್ಲಬೆಟ್ಟು ಸೇವಾ ಸಹಕಾರಿ ಬ್ಯಾಂಕ್‍ನ ಆಶ್ರಯದಲ್ಲಿ ಕಲ್ಲಬೆಟ್ಟುವಿನ ಅಕ್ಷಯಧಾಮ ಸಭಾಭವನದಲ್ಲಿ ನ.14ರಂದು 63ನೇ ಅಖಿಲ ಭಾರತ ಸಹಕಾರ ಸಪ್ತಾಹ ನಡೆಯಲಿದೆ.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷಿಕ ಡಾ.ಎಲ್.ಸಿ ಸೋನ್ಸ್ ಸಹಕಾರಿ ದ್ವಜಾರೋಹಣಗೈಯಲಿದ್ದಾರೆ. ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಸಹಕಾರಿ ಸಪ್ತಾಹಕ್ಕೆ ಚಾಲನೆನೀಡಲಿರುವರು.
ಕಲ್ಲಬೆಟ್ಟು ಸೇವಾ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹರೀಶ್ ಆಚಾರ್ಯ, ಯೂನಿಯನ್ ನಿರ್ದೇಶಕ ಎಂ.ಬಾಹುಬಲಿ ಪ್ರಸಾದ್, ದ.ಕ ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ ಸಲೀಂ ಮುಖ್ಯ ಅತಿಥಿಗಳಾಗಿರುವರು. ಮೈಸೂರು ಸಹಕಾರಿ ತರಬೇತಿ ಕೇಂದ್ರದ ನಿವೃತ್ತ ಪ್ರಾಂಶುಪಾಲ ಗುರುಮಲ್ಲಪ್ಪ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

