ಮೂಡುಬಿದಿರೆ: ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ, ದ.ಕ. ಹಾಗೂ ಸೈಂಟ್ ಜೋಸೆಫ್ ಪದವಿಪೂರ್ವ ಕಾಲೇಜು, ಬಜ್ಪೆ ಇದರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆಯಿತು.
ಬಾಲಕರ ವಿಭಾಗದಲ್ಲಿ 19 ಚಿನ್ನ, 16 ಬೆಳ್ಳಿ ಮತ್ತು 1 ಕಂಚಿನ ಪದಕಗಳನ್ನು ಪಡೆದು ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ 16 ಚಿನ್ನ, 14 ಬೆಳ್ಳಿ ಪದಕಗಳನ್ನು ಪಡೆದು ಆಳ್ವಾಸ್ ಪ.ಪೂ. ಕಾಲೇಜು ಪ್ರಶಸ್ತಿಯನ್ನು ಪಡೆಯಿತು. ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ನ16, 17ರಂದು ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

