ವಿಟ್ಲ: ಕಸ್ಬಾ ಗ್ರಾಮದ ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಪ್ರಗತಿಯಲ್ಲಿದ್ದು, ಮುಂದಿನ ವರ್ಷ ಮೇ ಒಂದನೇ ತಾರೀಕು ಶ್ರೀ ದೇವರ ಪುನರ್ ಪ್ರತಿಷ್ಠಾ ಕಾರ್ಯಕ್ರಮ ನಡೆಸುವುದೆಂದು ವಿಟ್ಲ ಅರಮನೆಯ ಕೃಷ್ಣಯ್ಯ ಕೆ ಘೋಶಿಸಿದರು. ಜೀರ್ಣೋದ್ಧಾರ ಪ್ರಗತಿಯ ಬಗ್ಗೆ ಮಾಹಿತಿಯನ್ನು ಕೆಲಸದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಇಂಜಿನೀಯರ್ ಜಗನ್ನಿವಾಸ್ ರಾವ್ ನೀಡಿದರು.
ಈ ಸಂದರ್ಭದಲ್ಲಿ ಮಂಗಳೂರಿನ ಉದ್ಯಮಿ ಕೊಡಿಂಬಾಡಿ ಅಶೋಕ್ ಕುಮಾರ್ ರೈ, ಜೀಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕೊಂಕೋಡಿ ಪದ್ಮನಾಭ, ಅಧ್ಯಕ್ಷ ಸದಾಶಿವ ಆಚಾರ್ಯ ಕೈಂತಿಲ, ಕಾರ್ಯಾಧ್ಯಕ್ಷ ಸೀತಾರಾಮ ಶೆಟ್ಟಿ ಒಕ್ಕೆತ್ತೂರು, ವಿಶ್ವಸ್ಥ ಮಂಡಳಿ ಅಧ್ಯಕ್ಷ ಕೆ ಸಂಕಪ್ಪ ಗೌಡ ಕೈಂತಿಲ, ಇತರ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.


