ಬಜಪೆ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು ” ಸಪ್ತ ಮುದ್ರಧಾರಣೆ” ಕಾರ್ಯಕ್ರಮವನ್ನು ಶುಕ್ರವಾರ ನೆರವೇರಿಸಿದರು.
ಸುಮಾರು 400ಕ್ಕೂ ಹೆಚ್ಚು ಮಂದಿ ಸ್ವಾಮೀಜಿಯವರಿಂದ ಸಪ್ತಮುದ್ರೆ ಹಾಕಿಸಿಕೊಂಡರು.

ದೇವಳದ ತಂತ್ರಿಗಳಾದ ವೇದವ್ಯಾಸ ತಂತ್ರಿ, ಅರ್ಚಕರುಗಳಾದ ವಾಸುದೇವ ಅಸ್ರಣ್ಣ, ಲಕ್ಷ್ಮೀನಾರಾಯಣ ಅಸ್ರಣ್ಣ, ಅನಂತ ಪದ್ಮನಾಭ ಅಸ್ರಣ್ಣ, ವೆಂಕಟರಮಣ ಅಸ್ರಣ್ಣ, ಕಮಲಾದೇವಿ ಪ್ರಸಾದ ಅಸ್ರಣ್ಣ, ಹರಿನಾರಾಯಣದಾಸ ಅಸ್ರಣ್ಣ ಅವರುಗಳು ಉಪಸ್ಥಿತರಿದ್ದರು.
