ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ಹಾವೇರಿ ಇವರ ಆಶ್ರಯದಲ್ಲಿ ಹಾವೇರಿ ಜಿಲ್ಲೆಯ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಕ್ರೀಡಾಪಟುಗಳ ತಂಡವು ಅವಳಿ ಪ್ರಶಸ್ತಿಯನ್ನು ಪಡೆದಿದೆ.

kabaddi-1

ಆಳ್ವಾಸ್ ಬಾಲಕರ ತಂಡವು ಕೋಲಾರ ಜಿಲ್ಲೆಯನ್ನು 41-12 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಬಾಲಕಿರ ತಂಡವು ಧಾರವಾಡ ಜಿಲ್ಲೆಯನ್ನು 37-12 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.

kabadi-2

ಬಾಲಕರ ವಿಭಾಗದಲ್ಲಿ ಉತ್ತಮ ದಾಳಿಗಾರ ಆಳ್ವಾಸ್‍ನ ರಕ್ಷಿತ್ ಎಸ್., ಹಾಗೂ ಸರ್ವಾಂಗೀಣ ಆಟಗಾರನಾಗಿ ಪ್ರವೀಣ್ ಎಸ್. ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಉತ್ತಮ ದಾಳಿಗಾರ್ತಿ ಆಳ್ವಾಸ್‍ನ ನಿಕ್ಷಿತಾ ಕೆ. ಹಾಗೂ ಸರ್ವಾಂಗೀಣ ಆಟಗಾರ್ತಿಯಾಗಿ ಧನಲಕ್ಷ್ಮಿ ಪ್ರಶಸ್ತಿಯನ್ನು ಪಡೆದಿದ್ದಾರೆ.

By suddi9

Leave a Reply

Your email address will not be published. Required fields are marked *