ಬಂಟ್ವಾಳ: ತುಂಬೆ ಗ್ರಾಮದ ಪರನೀರು ಎಂಬಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ತಂಡ ಸುಮಾರು 40 ಲೋಡಿನಷ್ಟು ಅಕ್ರಮ ಮರಳನ್ನು ಮುಟ್ಟುಗೋಲು ಹಾಕಿದೆ.

maralu-patte1

ಜಿಲ್ಲಾಧಿಕಾರಿ ಡಾ. ಜಗದೀಶ್ ನಿರ್ದೇಶನದ ಮೇರೆಗೆ ತಹಶೀಲ್ದಾರ್ ಪುರಂದರ ಹೆಗಡೆ ನೇತೃತ್ವದ ತಂಡ ಕಳೆದ ಮಧ್ಯೆ ರಾತ್ರಿ ಈ ದಾಳಿ ಕಾರ್ಯಾಚರಣೆ ನಡೆಸಿದೆ. ಇಲ್ಲಿನ ಮೋಹನ್ ರಾವ್ ಎಂಬವರಿಗೆ ಸೇರಿದ ಜಮೀನಿನಲ್ಲಿ ಈ ಅಕ್ರಮ ಮರಳು ದಾಸ್ತಾನಿಡಲಾಗಿತ್ತು. ಖಚಿತ ಮಾಹಿತಿ ಅನ್ವಯ ಬಂಟ್ವಾಳ ಗ್ರಾಮಾಂತರ ಪೊಲೀಸರ ಸಹಕಾರದೊಂದಿಗೆ ಈ ದಾಳಿ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಈ ಬಗ್ಗೆ ಜಮೀನಿನ ಮಾಲಕ ಮೋಹನ್ ರಾವ್ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕರಾದ ನವೀನ್, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕೆ., ಭೂ-ಗಣಿ ಇಲಾಖೆಯ ಗಿರೀಶ್ ಮೋಹನ್, ಗ್ರಾಮ ಕರಣಿಕರಾದ ಜನಾರ್ದನ್, ಯೋಗಾನಂದ, ರಾಜು, ರಾಜಶೇಖರ, ಬಸಪ್ಪ, ತಾಲೂಕು ಕಚೇರಿ ಸಿಬ್ಬಂದಿಗಳಾದ ಸದಾಶಿವ ಕೈಕಂಬ, ಶಿವಪ್ರಸಾದ್ ಅಮ್ಟೂರು ಅವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *