ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ಮಂಡ್ಯ ಮತ್ತು ಆದಿಚುಂಚನಗಿರಿಗಂಗಾಧರೇಶ್ವರ ಪದವಿಪೂರ್ವ ಸಂಯುಕ್ತ ಆಶ್ರಯದಲ್ಲಿ ಆದಿಚುಂಚನಗಿರಿಯಲ್ಲಿ ಜರುಗಿದ ರಾಜ್ಯ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ದ್ವಿತೀಯ ಪ್ರಶಸ್ತಿಯನ್ನು ಪಡೆಯಿತು.
ಬಾಲಕರ ವಿಭಾಗದಲ್ಲಿ ಆಳ್ವಾಸ್‍ನ ಕೃಷ್ಣಪ್ರಸಾದ್ ಕಶ್ಯಪ್ ಬೆಸ್ಟ್ ಡಾರ್ಜರ್, ಬಾಲಕಿಯರ ವಿಭಾಗದಲ್ಲಿ ಆಳ್ವಾಸ್‍ನ ನೀಲಮ್ಮ ಬೆಸ್ಟ್ ಆಲ್‍ರೌಂಡರ್ ಪ್ರಶಸ್ತಿಯನ್ನು ಪಡೆದರು. 7 ಕ್ರೀಡಾಪಟುಗಳು ರಾಷ್ಟ್ರೀಯ ಖೋ-ಖೋ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

