ಕೈಕಂಬ: ಅವರ್ ಲೇಡಿ ಆಫ್ ಪೊಂಪೈ ಆಂಗ್ಲ ಮಾಧ್ಯಮ ಶಾಲೆ ಕೈಕಂಬ ಇಲ್ಲಿ ನ.14ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮ ಜರುಗಿತು. ಮ್ಯಾನೆಜಿಂಗ್ ಟ್ರಸ್ಟಿ ವಾಲ್ಟರ್ ಸ್ಟೀಫನ್ ಮೆಂಡಿಸ್ ಕಾರ್ಯಕ್ರಮ ಉದ್ಘಾಟಿಸಿ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು.
ಈ ಸಂದರ್ಭ ಶಾಲಾ ಸಂಚಾಲಕಿ ಪ್ಲೋರೇನ್ಸ್ ಮೆಂಡಿಸ್, ಸ್ಟ್ಯಾನಿ ಫೆರ್ನಾಂಡೀಸ್, ಕಲ್ಯಾಣಿ, ಪ್ರಿಯಾ, ಟ್ರೇಸನ್ ಮಥಾಯಸ್, ವಿನಯ್ ಕುಮಾರ್, ಭಗತವಿ ಮತ್ತು ಮತ್ತಿತರರು ಉಪಸ್ಥಿತರಿದ್ದರು.ಮುಖ್ಯೋಪಾಧ್ಯಾಯ ಮಹೇಶ್ ಶೆಟ್ಟಿ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಸ್ವರ್ಣಲತಾ ವಂದಿಸಿದರು. ಸಿಕ್ಷಕ ವರ್ನೆನ್ ಕಾರ್ಯಕ್ರಮ ನಿರೂಪಿಸಿದರು.ವಿದ್ಯಾರ್ಥಿಗಳಿಗೆ ಕೃಷ್ಣ ಸ್ಪರ್ದೆ ನಡೆಯಿತು.

