ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಹಾಗೂ ಆಳ್ವಾಸ್ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ನೀಡಲಾಯಿತು.
ಮೂಡುಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್ ಕ್ರೀಡಾ ಧ್ವಜಾರೋಹಣಗೈದು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.ಮಂಗಳೂರು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಆರ್ ತಿಮ್ಮಯ್ಯ ಅಧ್ಯಕ್ಷತೆವಹಿಸಿದ್ದರು.

ಪುರಸಭಾ ಅಧ್ಯಕ್ಷೆ ರೂಪಾ ಶೆಟ್ಟಿ, ಆಳ್ವಾಸ್ ಪ.ಪೂ. ಕಾಲೇಜಿನ ಪ್ರಾಂಶುಪಾಲ ರಮೇಶ್ ಶೆಟ್ಟಿ, ಜಿಲ್ಲಾ ಕ್ರೀಡಾ ಸಂಯೋಜಕ ಶಶಿಧರ್ ಮಾಣಿ, ದೈಹಿಕ ಶಿಕ್ಷಣ ನಿರ್ದೇಶಕ ಆಳ್ವಾಸ್ ಪ. ಪೂ. ಕಾಲೇಜು ನವೀನ್ ರೈ ಉಪಸ್ಥಿತರಿದ್ದರು.ರಾಷ್ಟ್ರೀಯ ಕ್ರೀಡಾಪಟು ಅಭಿನಯ್ ಶೆಟ್ಟಿ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು.
