ಉಡುಪಿ: ರೋಟರಿ ಕ್ಲಬ್ ಮಲ್ಪೆ ಕೊಡವೂರು ಇದರ ವತಿಯಿಂದ ಕೊಡವೂರು ಅಂಗನವಾಡಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ನ.14 ರಂದು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಕ್ಕಳಿಗೆ ವಿವಿಧ ಸ್ಪದೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸರ್ಕಾರಿ ಹಿ.ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಂದರ ಮಾಸ್ತರ್, ಅದ್ಯಕ್ಷ ಪ್ರಭಾತ್ ಕೊಟ್ಯಾನ್,ಮಾಜಿ ಸಹಾಯಕ ಗವರ್ನರ್ ಮಹೇಶ್ ಕುಮಾರ್, ರಾಘವೇಂದ್ರ ಪ್ರಭು ಕರ್ವಾಲು, ಮುಂತಾದವರು ವೇದಿಕೆಯಲ್ಲಿದ್ದರು. ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.

