ಬಂಟ್ವಾಳ: ಮನುಷ್ಯರ ನಡುವಿನ ಸಂವಹನಕ್ಕೆ ಭಾಷೆ ಎಂಬುದು ಅಗತ್ಯವಾಗಿದ್ದು, ವರ್ತಮಾನ ಮತ್ತು ಭವಿಷ್ಯದ ದಿನಗಳಲ್ಲಿ ಆಂಗ್ಲ ಭಾಷೆ ಕಲಿಕೆ ಅನಿವಾರ್ಯವೂ ಆಗಿದೆ ಎಂದು ಮುಡಿಪು ಸರ್ಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕ ಪ್ರೊ. ನಂದಕಿಶೋರ್ ಹೇಳಿದ್ದಾರೆ.
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ ಕಾಲೇಜಿನಲ್ಲಿ ಆಂಗ್ಲ ಭಾಷಾ ಸಂಘದ ವತಿಯಿಂದ ಶುಕ್ರವಾರ ನಡೆದ ‘ಆಂಗ್ಲ ಭಾಷೆ ಕಲಿಕೆ ಮತ್ತು ಬಳಕೆ ಎಂಬ ವಿಷಯದ ಬಗ್ಗೆ ಅವರು ಉಪನ್ಯಾಸ ನೀಡಿದರು.
ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಧುನಿಕ ಸಮಾಜದಲ್ಲಿ ವಿದ್ಯಾರ್ಥಿಗಳು ಇಂಗ್ಲೀಷ್ ಭಾಷೆ ಕಲಿಯುವಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು ಎಂದರು.
ಆಂಗ್ಲ ಭಾಷಾ ಸಂಘದ ಸಂಯೋಜಕಿ ಉಪನ್ಯಾಸಕಿ ರಂಜಿತಾ ಗಿರೀಶ್ ಪ್ರಾಸ್ತಾವಿಕ ಮಾತನಾಡಿದರು. ಸಂಘದ ಸದಸ್ಯೆ ಪ್ರಜ್ಞಾ ಪಿ. ನಾಯಕ್ ಸ್ವಾಗತಿಸಿ, ವಿದ್ಯಾರ್ಥಿನಿಯರಾದ ಸಿಂಚನ ಮತ್ತು ಸುರಕ್ಷಾ ಪ್ರಾರ್ಥಿಸಿದರು. ಕ್ರಿಸ್ವಿನ್ ಪ್ರೇಮ್ ವಾಸ್ ವಂದಿಸಿದರು. ವಿದ್ಯಾರ್ಥಿನಿ ರಾಯಲ್ ವಿನಿಶಾ ಕಾರ್ಯಕ್ರಮ ನಿರೂಪಿಸಿದರು.

