ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ತಾ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳ , ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್ ಬಂಟ್ವಾಳ ವಲಯ , ಬಂಟ್ವಾಳ ಪತ್ರಕರ್ತರ ಸಂಘ, ಮತ್ತು ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಕಾನೂನು ಸಾಕ್ಷರತಾ ರಥ ಸಂಚಾರಿ ನ್ಯಾಯಾಲಯದ ಅಭಿಯಾನ ಮತ್ತು ಲೋಕ ಅದಾಲತ್ ನ. 26 ಶನಿವಾರದಿಂದ ಡಿ. 20 ಮಂಗಳವಾರದ ವರೆಗೆ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.

