ಬಂಟ್ವಾಳ: ಕುಕ್ಕಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ್ಯರಾದ ಪ್ರಮೀಳಾ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್‍ದಾಸ್ ಶೆಟ್ಟಿ, ಗ್ರಾಮಪಂಚಾಯತ್ ಸದಸ್ಯರಾದ ಆಸ್ಯಮ್ಮ, ಸುಮತಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಲೆನ್ನಿ, ಸಮಿತಿ ಸದಸ್ಯರಾದ ರಮೇಶ್ ಉಪಸ್ಥಿತರಿದ್ದು ಕಾರ್ಯಕ್ರಮದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಮೇಲ್ವಿಚಾರಕಿ ಗುಣವತಿ ಸ್ವಾಗತಿಸಿದರು. ಮಕ್ಕಳಿಗೆ ವಿವಿಧ ಸ್ಪರ್ಧೆಗಳಿದ್ದು ಬಹುಮಾನ ನೀಡಲಾಯಿತು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಪೋಷಕರು, ಸ್ತ್ರೀಶಕ್ತಿ ಸದಸ್ಯರು, ಉಪಸ್ಥಿತರಿದ್ದರು. ಕಾರ್ಯಕರ್ತೆ ಗೀತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

