ಬಂಟ್ವಾಳ: ಬಂಟ್ವಾಳ ತಾಲೂಕಿನ ಪತ್ರಕರ್ತರ ಸಂಘದ ವತಿಯಿಂದ ಮಾಣಿ ಪದವಿಪೂರ್ವ ಕಾಲೇಜಿನಲ್ಲಿ ಇಂದು ಮಧ್ಯಾಹ್ನ 1.30 ಗಂಟೆಗೆ ಏರ್ಪಡಿಸಿರುವ ‘ಪತ್ರಿಕಾ ಮಾಧ್ಯಮ ಸಂವಾದ ಮತ್ತು ಮಾಹಿತಿ’ ಕಾರ್ಯಕ್ರಮದಲ್ಲಿ ರಾಜ್ಯ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಡಾ.ಸಿದ್ಧರಾಜು ಭಾಗವಹಿಸಲಿದ್ದಾರೆ.
ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ್ ಬಿ.ಶಿವಪೂಜಿ, ಉಪಾಧ್ಯಕ್ಷ ಗೌರೀಶ ಶಾಸ್ತ್ರಿ, ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಮಾಣಿ ವಿದ್ಯಾಭಿವರ್ಧಕ ಸಂಘದ ಕಾರ್ಯದರ್ಶಿ ಕಿರಣ್ ಹೆಗ್ಡೆ, ವಾರ್ತಾಧಿಕಾರಿ ಖಾದರ್ ಷಾ, ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಮಾಧವ ಮಾವೆ ಮತ್ತಿತರ ಗಣ್ಯರು ಮತ್ತು ಜನಪ್ರತಿನಿಧಿಗಳು ಸಹಿತ ವಿದ್ಯಾರ್ಥಿಗಳು ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ಮೋಹನ್ ಕೆ.ಶ್ರೀಯಾನ್ ರಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

