ವಿಟ್ಲ: “ಪೋಷಕರು ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಮಕ್ಕಳಿಗೆ ಮಾದರಿಯಾಗಬೇಕು” ಎಂದು ಸಮಾರಂಭದ ಅಧ್ಯಕ್ಷ ಪ್ರಹ್ಲಾದ್ ಜೆ.ಶೆಟ್ಟಿಯವರು ಹೇಳಿದರು.ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪೋಷಕರ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.“ ಕ್ರೀಡಾಕೂಟದ ಯಶಸ್ಸಿಗೆ ಪೋಷಕರು ಕಾರಣೀಭೂತರು ಆದ್ದರಿಂದ ಅವರು ಕ್ರೀಡಾಕೂಟದಲ್ಲಿ ಭಾಗವಹಿಸಿ ತಮ್ಮ ಮಕ್ಕಳಿಗೆ ಮಾದರಿಯಾಗಬೇಕು” ಎಂದರು.



ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ನಾರಾಯಣ ಶೆಟ್ಟಿ , ಆಡಳಿತಾಧಿಕಾರಿ ಸಿ.ಶ್ರೀಧರ್, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ.ಶೆಟ್ಟಿ. ಉಪಸ್ಥಿತರಿದ್ದರು.ತೆಂಗಿನಕಾಯಿ ಒಡೆಯುವ ಮೂಲಕ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಶಿಕ್ಷಕ –ರಕ್ಷಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಶಿಕ್ಷಕರು ಕ್ರೀಡಾಕೂಟದ ಮೇಲ್ವಿಚಾರಣೆ ವಹಿಸಿದ್ದರು. ಪೋಷಕರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಿಕ್ಷಕ –ರಕ್ಷಕ ಸಂಘದ ಅಧ್ಯಕ್ಷ ಕೆ.ಬಾಲಕೃಷ್ಣ ಆಳ್ವರವರು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.


