ಬಂಟ್ವಾಳ: ಬಂಟ್ವಾಳ ತಾಲೂಕು ಸಜೀಪಮೂಡ ಅನ್ನಪ್ಪಾಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಂಗವಾಗಿ ಪಾದುಕಾನ್ಯಾಸ ಅಥರ್ವಶೀರ್ಷ ಹೋಮ ಡಿ.7ರಂದು ಬುಧವಾರ ಶಿಲಾಮಯ ದೇವಾಲಯದ ಪುನರ್ ನಿರ್ಮಾಣಕ್ಕೆ ವಿದ್ಯುಕ್ತವಾಗಿ ಶ್ರದ್ಧಾ ಭಕ್ತಿಯಿಂದ ಜರಗಲಿದೆ.

rudra

ಬ್ರಹ್ಮಶ್ರೀ ನಿಲೇಶ್ವರ ಕೆ.ಯು.ಪದ್ಮನಾಭ ತಂತ್ರಿಗಳು ನೆರವೇರಿಸಲಿರುವರು. ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.

ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಹಾಗೂ ಮತ್ತಿತರ ಗಣ್ಯ ವ್ಯಕ್ತಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬಳಿಕ ಅನ್ನದಾನ ನಡೆಯಲಿರುವುದು ಎಂದು ಪ್ರಕಟನೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *