ಮೂಡುಬಿದಿರೆ: ಇಂದಿನ ಯುವಜನತೆ ವಾಹನಗಳನ್ನು ಚಲಾಯಿಸಲು ತೋರುವ ಆಸಕ್ತಿಯನ್ನು ರಸ್ತೆ ಸುರಕ್ಷತೆಯ ಬಗ್ಗೆ ವಹಿಸುವುದಿಲ್ಲ. ಹಾದಿ ತಪ್ಪಿ ಅನಾಹುತಗಳಿಗೆ ಇಡೆ ಮಾಡಿಕೊಡುವುದಕ್ಕಿಂತ ಮುಂಚೆಯೇ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಇಂತಹ ಸ್ಪರ್ಧೆಗಳು ರಸ್ತೆ ಸುರಕ್ಷತೆಯ ಬಗ್ಗೆ ಯುವಜನರಲ್ಲಿ ಜಾಗೃತಿಯನ್ನು ಮೂಡಿಸುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಹೇಳಿದರು.
ಮಂಜುಶ್ರೀ ಡ್ರೈವಿಂಗ್ ಸ್ಕೂಲ್ ಹಾಗೂ ಮೂಡುಬಿದಿರೆ ಲಯನ್ಸ್ ಕ್ಲಬ್ ವತಿಯಿಂದ ಸಮಾಜ ಮಂದಿರದಲ್ಲಿ ಶನಿವಾರ ನಡೆದ ರಸ್ತೆ ಸುರಕ್ಷತೆ ಕುರಿತು ವಿದ್ಯಾರ್ಥಿಗಳಿಗಾಗಿ ನಡೆದ ರಸ ಪ್ರಶ್ನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೂಡುಬಿದಿರೆ ಲಯನ್ಸ್ ಕ್ಲಬ್ ಅಧ್ಯಕ್ಷ ರುಕ್ಕಯ್ಯ ಪೂಜಾರಿ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಪ್ರಮಥ್ ಕುಮಾರ್, ಉದ್ಯಮಿ ತಿಮ್ಮಯ್ಯ ಶೆಟ್ಟಿ, ಲಯನ್ಸ್ ಜಿಲ್ಲಾಧ್ಯಕ್ಷ ಮುನ್ನಾ ರಾವ್ ಭಾಗವಹಿಸಿದರು. ಮೂಡುಬಿದಿರೆ ಲಯನ್ಸ್ ಕ್ಲಬ್ ಕಾರ್ಯದರ್ಶಿ ಮುರಳೀಧರನ್ ಪಿ. ಆರ್., ಲಯನ್ಸ್ ಜಿಲ್ಲಾ ರಸ್ತೆ ಸುರಕ್ಷತಾ ವಿಭಾಗದ ಜಿಲ್ಲಾ ಸಂಯೋಜಕ ಶಿವಪ್ರಸಾದ್ ಹೆಗ್ಡೆ, ಮಂಜುಶ್ರೀ ಡ್ರೈವಿಂಗ್ ಸ್ಕೂಲ್‍ನ ಪ್ರಾಂಶುಪಾಲೆ ಶೋಭಾ ಎಸ್. ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿವಪ್ರಸಾದ್ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು. ಮೂಡುಬಿದಿರೆ ವಲಯದ 29ಶಾಲೆಗಳ 150ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

