ವಿಟ್ಲ: ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಮತ್ತು ಆವರಣ ಗೋಡೆಯ ಸ್ವಚ್ಛತಾ ಕಾರ್ಯವನ್ನು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಮತ್ತು ಭಾಲಾವಲೀಕಾರ್/ರಾಜಾಪುರ ಸಾರಸ್ವತ ಸೇವಾ ಸಂಘ ವಿಟ್ಲ ಇವರ ಜಂಟಿ ಆಶ್ರಯದಲ್ಲಿ ನಡೆಸಲಾಯಿತು.
ಟ್ರಸ್ಟ್ ಪದಾಧಿಕಾರಿಗಳು, ಸಂಘದ ಸದಸ್ಯರು ಭಾಗವಹಿಸಿದ್ದರು. ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.

