ಮೂಡುಬಿದಿರೆ: ಮಾನಸಿಕ ರೋಗದಿಂದ ಬಳಲುತ್ತಿದ್ದ ವಿವಾಹಿತೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇರುವೈಲಿನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಇರುವೈಲು ಕರ್ನಾಲುಕೋಡಿ ಮಹಾಬಲ ಪೂಜಾರಿಯವರ ಪತ್ನಿ ರತ್ನ(45)ಎಂದು ಗುರುತಿಸಲಾಗಿದೆ. ಕೆಲವು ಸಮಯಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಭಾನುವಾರ ರಾತ್ರಿ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

