ಮೂಡುಬಿದಿರೆ: ಬೆಳುವಾಯಿ ಸಮೀಪದ ಕೆಸರುಗದ್ದೆ ಬೈಲಬರಿಯ ಮನೆಯೊಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ ಸುಮಾರು 84 ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ.

crime

ದೇಜು ಮತ್ತು ರವಿ ಬಂಧಿತ ಆರೋಪಿಗಳು. ದೇಜು ಎಂಬವರ ಮನೆಯಲ್ಲಿ ಆರೋಪಿಗಳು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದರು. ಸಾರ್ವಜನಿಕ ದೂರಿನ ಮೇರೆಗೆ ಪೊಲೀಸರು ಭಾನುವಾರ ರಾತ್ರಿ ಮನೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

By suddi9

Leave a Reply

Your email address will not be published. Required fields are marked *