ಕೈಕಂಬ: ಮಂಗಳೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಆರೋಗ್ಯ ಪದ್ಧತಿ ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಯ “ಕಂದಾವರ ಉಪಕೇಂದ್ರ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ”ಗೆ ನ.26ರಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊಹಯುದ್ದೀನ್ ಬಾವಾ ಗುದ್ದಲಿಪೂಜೆ ನೆರವೇರಿಸಿದರು.

1

ಈ ಸಂದರ್ಭ ಕಂದಾವರ ಗ್ರಾ.ಪಂ ಅಧ್ಯಕ್ಷ ವಿಜಯ ಗೋಪಾಲ ಸುವರ್ಣ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದರು. ದ.ಕ.ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ.ಸದಸ್ಯ ಯು.ಪಿ.ಇಬ್ರಾಹಿಂ, ತಾ.ಪಂ.ಸದಸ್ಯ ವಿಶ್ವನಾಥ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ರಾಮಕೃಷ್ಣ ರಾವ್ ಉಪಸ್ಥಿತರಿದ್ದರು. ರುದ್ರೇಶ್ ಕಾರ್ಯಕ್ರಮ ಸ್ವಾಗತಿಸಿ, ನಿರೂಪಿಸಿದರು.

By suddi9

Leave a Reply

Your email address will not be published. Required fields are marked *