ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ತಾ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳ , ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್ ಬಂಟ್ವಾಳ ವಲಯ , ಬಂಟ್ವಾಳ ಪತ್ರಕರ್ತರ ಸಂಘ, ಮತ್ತು ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಕರಿಂಗಾಣ ಕೇಶವನಗರ ಶಾರದಾಂಬ ಭಜನಾ ಮಂದಿರದಲ್ಲಿ ನಡೆದ ಕಾನೂನು ಮಾಹಿತಿ ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀ ಶರಾದ ಆರ್.ಮಹೇಶ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಹಿರಿಯ ವಕೀಲ ರಾದ ಕಜೆ ರಾಮಚಂದ್ರ ಭಟ್ ಸ್ಥಿರಾಸ್ತಿ ಹಕ್ಕು ಪರಭಾರೆ ಬಗ್ಗೆ ಮಾಹಿತಿ ನೀಡಿದರು. ಶಾರದಾಂಬ ಭಜನಾ ಮಂದಿರದ ಅಧ್ಯಕ್ಷ ದೋಗ್ರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ವೆಂಟ್ರಮಣ ಶೆಣೈ, ಸಹಾಯಕ ಸರಕಾರಿ ಅಭಿಯೋಜಕ ಎಂ.ಎಸ್.ಆಲಿ, ಎಸ್.ಕೆ.ಪಿ.ಎ.ಹಿರಿಯ ಸದಸ್ಯ ಜಯರಾಮ್ ರೈ, ವಕೀಲರು ಗಳಾದ ರಾಜಾರಾಮ್ ನಾಯಕ್, ರಾಜೇಶ್ ಬೊಳ್ಳುಕಲ್ಲು, ಸುರೇಶ್ ಕುಮಾರ್ ನಾವೂರು, ಜಯರಾಮ್ ರೈ, ವಿಶ್ವನಾಥ ಗೌಡ, ಆಶಾಪ್ರಸಾದ್ ರೈ, ವಿನೋದ , ಆಶಾಮಣಿ, ಸಿಬ್ಬಂದಿ ಬಾಲಕೃಷ್ಣ ಉಪಸ್ಥಿತರಿದ್ದರು. ಸಹಾಯಕ ಸರಕಾರಿ ವಕೀಲ ಸತೀಶ್ ಕುಮಾರ್ ಶಿವಗಿರಿ ಸ್ವಾಗತಿಸಿದರು. ಶಿಕ್ಷಕ ಗೋಪಾಲ್ ಕೃಷ್ಣ ವಂದಿಸಿ , ನ್ಯಾಯವಾದಿ ಶಿವಪ್ರಕಾಶ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

