ಬಂಟ್ವಾಳ: ಕಳ್ಳಿಗೆ ಗ್ರಾಮದ ತಡಂಬಿಲ ಶಾಲೆಯ ಬಳಿ ಮಹಿಳೆಯ ಕತ್ತಿನಿಂದ ಚಿನ್ನದ ಸರವನ್ನು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದು ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿಸಿದೆ. ಬೋಳಿಯಾರ್ ನಿವಾಸಿ ಅಬ್ದುಲ್ ನವಾಝ್(21) ಬಂಧಿತ ಆರೋಪಿಯಾಗಿದ್ದು ಸಜೀಪಮೂಡ ಗ್ರಾಮದ ಬೇಂಕೆ ಎಂಬಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಆತನನ್ನು ಬಂಧಿಸಲಾಗಿದೆ.

crime-1

ಈತನಿಂದ ಎಗರಿಸಲಾದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳೆದ ಭಾನುವಾರ ಸಂಜೆ ತಡಂಬಿಲ ಶಾಲೆ ಬಳಿ ಹಾಲಿನ ಡೈರಿಗೆ ಹಾಲು ಕೊಟ್ಟು ವಾಪಸ್ ಮನೆಗೆ ತೆರಳುತ್ತಿದ್ದ ರೀಟಾಮೊಂತೆರೋ ಎಂಬವರ ಕತ್ತಿನಿಂದ ಬೈಕ್‍ನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಚಿನ್ನದ ಸರ ಕಸಿದು ಪರಾರಿಯಾಗಿದ್ದರು.

ಬಂಟ್ವಾಳ ಉಪ ವಿಭಾಗದ ಡಿವೈಎಸ್‍ಪಿ ರವೀಶ್ ಸಿ.ಆರ್. ಮಾರ್ಗದರ್ಶನದಲ್ಲಿ ಸಿಐ ಬಿ.ಕೆ.ಮಂಜಯ್ಯ ಅವರ ನೇತೃತ್ವದಲ್ಲಿ ನಗರ ಠಾಣೆಯ ಎಸ್ಸೈ ನಂದಕುಮಾರ್ ಆರೋಪಿಯನ್ನು ಬಂಧಿಸಿದ್ದು ಎಎಸ್ಸೈ ಸಂಜೀವ, ಎಚ್‍ಸಿ ಸುರೇಶ್, ಗಿರೀಶ್, ಸಂಪತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

By suddi9

Leave a Reply

Your email address will not be published. Required fields are marked *