ವಾಷಿಂಗ್‌ಟನ್: ನೂತನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲ ಬಾರಿಗೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಮಾತನಾಡಿದ್ದು ಪಾಕ್ ಕುರಿತು ಮೆಚ್ಚುಗೆ ವ್ಯಕ್ತಪಡಿಸದ್ದಾರೆ ಎನ್ನಲಾಗಿದೆ. ಈ ಕುರಿತು ಅಧಿಕೃತ ಹೇಳಿಕೆ ನೀಡಿರುವ ಪಾಕಿಸ್ತಾನ ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ ಡೊನಾಲ್ಡ್ ಟ್ರಂಪ್, ಪಾಕ್ ಪ್ರಧಾನಿ ನವಾಜ್ ಷರೀಫ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಒಳ್ಳೆಯ ಹೆಸರನ್ನು ಹೊಂದಿದ್ದಾರೆ ಎಂದು ಹೇಳಿರುವುದಾಗಿ ಹೇಳಿಕೆ ಬಿಡುಗಡೆ ಮಾಡಿದೆ.

trump-1

ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟ್ರಂಪ್‌ಗೆ ಪಾಕ್ ಪ್ರಧಾನಿ ನವಾಜ್ ಷರೀಫ್, ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಷರೀಪ್‌ರನ್ನು ಅದ್ಬುತ ವ್ಯಕ್ತಿ ಎಂದು ಬಣ್ಣಿಸಿರುವ ಟ್ರಂಪ್ ನಿಮ್ಮೊಂದಿಗೆ ಮಾತನಾಡುತ್ತಿರುವುದು ಹಳೆಯ ಪರಿಚಯದ ವ್ಯಕ್ತಿಯೊಂದಿಗೆ ಮಾತನಾಡುವಂತೆ ಭಾಸವಾಗುತ್ತಿದೆ ಎಂದು ಹೇಳಿದ್ದಾಗಿ ಪಾಕಿಸ್ತಾನದ ಪಿಐಬಿ ತಿಳಿಸಿದೆ. ಅಲ್ಲದೇ ಪಾಕಿಸ್ತಾನದ ಜನತೆಯನ್ನು ಅಸಾಮಾನ್ಯ ಬುದ್ಧಿವಂತರೆಂದು ಡೊನಾಲ್ಡ್ ಟ್ರಂಪ್ ಬಣ್ಣಿಸಿದ್ದು ಪಾಕಿಸ್ತಾನಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ನೀವು ಅಪೇಕ್ಷಿಸುತ್ತಿರುವ ಪಾತ್ರವನ್ನು ನಿರ್ವಹಿಸಲಿದ್ದೇನೆ ಎಂದು ಭರವಸೆ ನೀಡಿದ್ದಾರೆ.

By suddi9

Leave a Reply

Your email address will not be published. Required fields are marked *