ಮೂಡುಬಿದಿರೆ: ವಾಲ್ಪಾಡಿ ಗ್ರಾಮದ ಅಳಿಯೂರಿನಲ್ಲಿ ಮಾರುತಿ ಆಮ್ನಿ(ಕೆ.ಎ ಎಂಇ 2569)ಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ದನದ ಕರುವನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿದ ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಗುರುವಾರ ರಾತ್ರಿ ಸುಮಾರು 9 ಗಂಟೆಗೆ ಅಳಿಯೂರಿನಲ್ಲಿ ಮಾರುತಿ ಆಮ್ನಿಯನ್ನು ಪೊಲೀಸರು ತಡೆದು ತಪಾಸಣೆ ನಡೆಸಿದಾಗ ಅದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗಂಡುಕರುವನ್ನು ಕಟ್ಟಿಹಾಕಲಾಗಿತ್ತು. ಆರೋಪಿ ಪರಾರಿಯಾಗಿದ್ದು ವಾಹನ ಹಾಗೂ ಅದರಲ್ಲಿದ್ದ ಕರುವನ್ನು ಪೊಲೀಸರು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೂಡುಬಿದಿರೆ ಪೊಲೀಸ್‍ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

