ಮೂಡುಬಿದಿರೆ: ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪಿಯು ಕಾಲೇಜಿನ ಆಶ್ರಯದಲ್ಲಿ ಎಕ್ಸಲೆಂಟ್ ಫೆಸ್ಟ್, ಕನ್ನಡ ಹಬ್ಬ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಮ್ಮಿಲನ ಸಮಾರಂಭವು ಡಿ.9ರಂದು ಕಲ್ಲಬೆಟ್ಟುವಿನಲ್ಲಿರುವ ಕಾಲೇಜು ಕ್ಯಾಂಪಸ್ಸಿನಲ್ಲಿ ನಡೆಯಲಿದೆ.
ಮಧ್ಯಾಹ್ನ 2 ಗಂಟೆಗೆ ಕನ್ನಡ ಹಬ್ಬವನ್ನು ಪೆರಿಂಜೆ ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ಜೀವಂಧರ್ ಜೈನ್ ಕಾರ್ಯಕ್ರಮ ಉದ್ಘಾಟಿಸಲಿರುವರು. ಪತ್ರಕರ್ತ ಮನೋಹರ್ ಪ್ರಸಾದ್ ಮುಖ್ಯ ಅತಿಥಿಯಾಗಿರುವರು . ಸಂಜೆ 6ಗಂಟೆಗೆ ನಡೆಯಲಿರುವ ಹಳೇ ವಿದ್ಯಾರ್ಥಿ ಸಮ್ಮಿಲನ ಹಾಗೂ ಪ್ರಶಸ್ತಿ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲ ವಹಿಸಲಿದ್ದಾರೆ. ಕಾರ್ಕಳದ ಶಾಸಕ ಸುನೀಲ್ ಕುಮಾರ್ ಮುಖ್ಯ ಅತಿಥಿಯಾಗಿರುವರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸುಷ್ಮಾ ಪ್ರಮೋದ್ ಅವರಿಂದ ಶಾಸ್ತ್ರೀಯ ನೃತ್ಯ, ಮಕ್ಬೂಲ್ ಹುಸೇನ್ ಅವರಿಂದ ಹಳೆ ಹಿಂದಿ ಚಿತ್ರಗೀತೆಗಳ ಗಾಯನ, ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ, ಎಕ್ಸಲೆಂಟ್ ಕಾಲೇಜಿನ ಸಿಬ್ಬಂದಿಗಳು, ವಿದ್ಯಾರ್ಥಿಗಳಿಂದ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನವಿದೆ ಎಂದು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಯುವರಾಜ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

