ವಿಟ್ಲ: ಗ್ರೀನ್ ವೀವ್ ವಿದ್ಯಾ ಸಂಸ್ಥೆ ಅಡ್ಕರೆ ಪಡ್ಪುವಿನಲ್ಲಿ ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಕಲಿಕಾ ತರಬೇತಿ ಹಾಗೂ ಪರೀಕ್ಷಾ ಪೂರ್ವ ಸಿದ್ದತಾ ಶಿಭಿರ ಗ್ರೀನ್ ವೀವ್ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ನಡೆಯಿತು, ಶಾಲಾ ಸಂಚಾಲಕರಾದ ಹಾಜಿ ಇಬ್ರಾಹಿಂ ಕೋಡಿಜಾಲ್ ಕಾರ್ಯಕ್ರಮ ಉಧ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಕೃಷ್ಣ ಮೋಹನ್ ಪಿ.ಯಸ್. ಆಗಮಿಸಿದ್ದರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜನಾಬ್ ಅಬ್ದುಲ್ ಖಾದರ್ ಅದ್ಯಕ್ಷತೆಯನ್ನು ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಗ್ರೀನ್ ಪಿ.ಯು. ಕಾಲೇಜಿನ ಪ್ರಾಂಶುಪಾಲ ಅಬೂಬಕ್ಕರ್ , ಪ್ರಾಥಮಿಕ ಶಾಲಾ ಅದ್ಯಾಪಕ ಟಿಪ್ಪೋಜಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಸಿರಾಜ್ ಅಡ್ಕರೆ ಸ್ವಾಗತ ಹಾಗೂ ಧನ್ಯವಾದ ಗೈದರು, ಉಪಾಧ್ಯಕ್ಷ ಮುಸ್ತಫಾ ಪ್ರಾಸ್ತಾವನೆಗೈದರು, ಪ್ರೌಢ ಶಾಲೆಯ ಶಿಕ್ಷಕಿ ನಮಿತಾ ಕಾರ್ಯಕ್ರಮ ನಿರೂಪಿಸಿದರು.

