ಸುರತ್ಕಲ್: ಎಂಆರ್ಪಿಎಲ್ ಬಳಿಯ ಜಂತಬೆಟ್ಟುವಿನಲ್ಲಿ ಖಾಸಗಿ ಬಡಾವಣೆ ನಿರ್ಮಾಣ ಸಂದರ್ಭ ತಡೆಗೋಡೆ ಕುಸಿದು ಕೃಷಿ ಭೂಮಿಗೆ ಹಾನಿ ಸಂಭವಿಸಿದ್ದು ಜಿಲ್ಲಾ ಪಂಚಾಯಿತಿ ಸಿಇಒ ತುಳಸಿ ಮದ್ದಿನೇನಿ ಗುರುವಾರ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ರಿತೇಸ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. 

