ಬಂಟ್ವಾಳ: ತಾಲ್ಲೂಕಿನ ತುಂಬೆ ಫಾದರ್ ಮುಲ್ಲರ್ ಹೋಮಿಯೋಪಥಿ ಹೊರರೋಗಿ ವಿಭಾಗ ವತಿಯಿಂದ ಇದೇ 17ರಂದು ಬೆಳಿಗ್ಗೆ 9ಗಂಟೆಯಿಂದ ಉಚಿತ ಹೋಮಿಯೋಪಥಿ ವೈದ್ಯಕೀಯ ತಪಾಸಣಾ ಶಿಬಿರ ನಡೆಯಲಿದೆ.
ಈ ಶಿಬಿರದಲ್ಲಿ ಮಕ್ಕಳು ಮತ್ತು ಮಹಿಳೆಯರು ಮತ್ತು ವೃದ್ಧಾಪ್ಯ ಖಾಯಿಲೆ ಮತ್ತಿತರ ಸಮಸ್ಯೆಗಳ ಬಗ್ಗೆ ತಪಾಸಣೆ ನಡೆಸಿ ಉಚಿತ ಔಷಧಿ ಮತ್ತು ಚಿಕಿತ್ಸೆ ನೀಡಲಾಗುತ್ತದೆ ಎಂದು ಆಸ್ಪತ್ರೆ ಆಡಳಿತಾಧಿಕಾರಿ ಧರ್ಮಗುರು ರೋಶನ್ ಕ್ರಾಸ್ತ ತಿಳಿಸಿದ್ದಾರೆ.

