ಬಂಟ್ವಾಳ: ತುಂಬೆ ಅಭಿಮಾನಿ ಬಳಗದ ವತಿಯಿಂದ ತುಂಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಯಲ್ಲಿ ನಡೆದ ತುಂಬೆ ಉತ್ಸವ ಕಾರ್ಯಕ್ರಮದಲ್ಲಿ ತುಂಬೆ ಬಿ.ಎ. ಸಮೂಹ ಸಂಸ್ಥೆಗಳ ಸ್ಥಾಪಕ ಡಾ. ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ , ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಹಾಗೂ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್ ಅವರನ್ನು ಸನ್ಮಾನಿಸಲಾಯಿತು.

btw

ಈ ಸಂದರ್ಭ ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ರವೀಂದ್ರ ಕಂಬಳಿ, ತಾ.ಪಂ.ಸದಸ್ಯ ಗಣೇಶ್ ಸುವರ್ಣ, ತುಂಬೆ ಗ್ರಾ.ಪಂ.ಅಧ್ಯಕ್ಷೆ ಹೇಮಲತಾ ಜಿ. ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ., ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಾಯಾಧಿಕಾರಿ ರಾಜೇಶ್, ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ, ತುಂಬೆ ಸ.ಹಿ.ಪ್ರಾ ಶಾಲೆಯ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಶೋಕ್, ಮುಖ್ಯೋಪಾಧ್ಯಾಯಿನಿ ಯಮುನ ಭಾಗವಹಿಸಿದ್ದರು. ತುಂಬೆ ಅಭಿಮಾನಿ ಬಳಗದ ಗೌರವಾದ್ಯಕ್ಷ ಗೋಪಾಲಕೃಷ್ಣ ತುಂಬೆ ಕಾರ್ಯಧ್ಯಕ್ಷ ಡಾ. ಅಮೀರ್ ಅಹಮದ್ ತುಂಬೆ, ಅಧ್ಯಕ್ಷ ದೇವದಾಸ ತುಂಬೆ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *