ಮೂಡುಬಿದಿರೆ: ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರಿದ್ದು ಖಾಸಗಿ ಶಾಲೆಗೆ ಸರಿ ಸಮಾನವಾದ ಶಿಕ್ಷಣವನ್ನು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳೆಂಬ ಕೀಳರಿಮೆ ಬೆಳೆಸಿಕೊಳ್ಳದೆ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕು ಎಂದು ಶಾಸಕ ಕೆ. ಅಭಯಚಂದ್ರ ಜೈನ್ ಹೇಳಿದರುಜಿ.ಪಂ.ಹಿ.ಪ್ರಾ ಮೈನ್ ಶಾಲೆಯಲ್ಲಿ ಸೋಮವಾರ 2.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಶೌಚಾಲಯ ಮತ್ತು ವಿದ್ಯಾರ್ಥಿಗಳಿಗೆ ಸೈಕಲ್ ಹಾಗೂ ದಾನಿಗಳು ನೀಡಿದ ಬೆಲ್ಟ್‍ಗಳನ್ನು ವಿತರಿಸಿ ಅವರು ಮಾತನಾಡಿದರು. ಈ ಶಾಲೆಯ ಮಕ್ಕಳ ಕಲಿಕೆಗೆ ಹೆಚ್ಚಿನ ಅನುಕೂಲವಾಗುವಂತೆ ಕಂಪ್ಯೂಟರ್‍ಗಳನ್ನು ಒದಗಿಸಲಾಗುವುದು. ಕಂಪ್ಯೂಟರ್ ಕಲಿಕೆಯ ಜವಬ್ದಾರಿಯನ್ನು ಶಿಕ್ಷಕರೇ ವಹಿಸಬೇಕು. ಮುಂದಿನ ಜನವರಿಯಿಂದ ಇಸ್ಕಾನ್‍ನಿಂದ ಗುಣಮಟ್ಟದ ಬಿಸಿಯೂಟ ಒದಗಿಸಲಾಗುವುದು ಎಂದರು.

ಪುರಸಭಾಧ್ಯಕ್ಷೆ ಹರಿಣಾಕ್ಷಿ ಸುವರ್ಣ, ಶಿಕ್ಷಣ ಸಂಯೋಜಕಿ ರಾಜಶ್ರೀ ನಾಯಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಪುರಸಭಾ ಸ್ಥಾಯೀ ಸಮಿತಿ ಅಧ್ಯಕ್ಷ ಕೊರಗಪ್ಪ, ತಾ.ಪಂ ಮಾಜಿ ಸದಸ್ಯ ಪ್ರಕಾಶ್ ಪಿ. ಗುತ್ತಿಗೆದಾರರು ಮಾಧವ ಭಂಡಾರಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಸುದೇಶ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಶೀನ ನಾಯ್ಕ್, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಫ್ಲಾವಿಯಾ ಸ್ವಾಗತಿಸಿದರು. ಸತ್ಯವತಿ ಕಾರ್ಯಕ್ರಮ ನಿರ್ವಹಿಸಿದರು.
—

