ಮೂಡುಬಿದಿರೆ: ತಮಿಳುನಾಡಿನ ನಾಗರಕೊೈಲ್‍ನಲ್ಲಿ ಜರಗಲಿರುವ ರಾಷ್ಟ್ರೀಯ ಸೀನಿಯರ್ ವೇಯ್ಟ್‍ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭವಿಷ್ಯ ಆಯ್ಕೆಯಾಗಿದ್ದಾರೆ. ಭುವನೇಶ್ವರದಲ್ಲಿ ಇತ್ತೀಚೆಗೆ ಜರುಗಿದ ರಾಷ್ಟ್ರೀಯ ಜೂನಿಯರ್ ವೇಯ್ಟ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಈಕೆ ಬೆಳ್ಳಿಯ ಪದಕವನ್ನು ಪಡೆದಿದ್ದರು.

