ಮೂಡುಬಿದಿರೆ : ಕಲ್ಲಬೆಟ್ಟು ಉನ್ನತೀಕರಿಸಿದ ಸರಕಾರಿ ಜಿ.ಪಂ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಸೈಕಲ್‍ಗಳನ್ನು ಶಾಸಕ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಮಂಗಳವಾರ ವಿತರಿಸಿದರು.
ನಂತರ ಮಾತನಾಡಿದ ಸರ್ಕಾರವು ವಿದ್ಯಾರ್ಥಿಗಳಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು. ವಿದ್ಯೆಯಿಂದ ಗೌರವ ಹೆಚ್ಚುತ್ತದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದು, ಅವರಿಂದ ಉತ್ತಮ ಶಿಕ್ಷಣವನ್ನು ಪಡೆದು ವಿವಿಧ ಕ್ಷೇತ್ರಗಳಲ್ಲಿ ಸೇವೆಗಳನ್ನು ಮಾಡುವ ಕನಸುಗಳನ್ನು ಕಾಣುವಂತೆ ಸಲಹೆ ನೀಡಿದರು.
ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ, ಉಪಾಧ್ಯಕ್ಷ ವಿನೋದ್ ಸೆರಾವೊ, ಸ್ಥಾಯಿ ಸಮಿತಿ ಅಧ್ಯಕ್ಷ ಕೊರಗಪ್ಪ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಾಲಿದ್ ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಿಕ್ಷಕಿ ಉಷಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕ ವಿನಯ ಕುಮಾರ್ ವಂದಿಸಿದರು.

