ಬಂಟ್ವಾಳ: ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಣ್ಣಳಿಕೆ ಬಸ್‍ನಿಲ್ದಾಣ ಬಳಿ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಇವರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಾದ ರೂ 2ಲಕ್ಷ ವೆಚ್ಛದ ಸೋಲಾರ್ ದೀಪ ಅಳವಡಿಕೆ ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ ಅವರು ಶುಕ್ರವಾರ ಉದ್ಘಾಟಿಸಿದರು.
ಮಾಜಿ ಅಧ್ಯಕ್ಷ ಹರೀಶ ಆಚಾರ್ಯ, ಸದಸ್ಯರಾದ ಕುಸುಮಾ, ರಾಘವ ಅಮೀನ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ವಸಂತ ಕುಮಾರ್, ರಾಮಚಂದ್ರ ಶೆಟ್ಟಿಗಾರ್, ಪರಮೇಶ್ವರ ಪೂಜಾರಿ, ಚಂದಪ್ಪ ಪೂಜಾರಿ ಮತ್ತಿತರರು ಇದ್ದರು.

