ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ಇದರ ವಿಟ್ಲ ವಲಯದ ಇಡ್ಕಿದು ಮತ್ತು ಅಳಕೆಮಜಲು ಒಕ್ಕೂಟಗಳ ನೇತೃತ್ವದಲ್ಲಿ ಪರಮ ಪೂಜ್ಯ ಡಾ| ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಿಂದ ಶ್ರದ್ಧಾ ಕೇಂದ್ರವಾದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ವಿಟ್ಲ ವಲಯ ಮೇಲ್ವಿಚಾರಕ ಜನಾರ್ಧನ, ಸೇವಾ ಪ್ರತಿನಿಧಿಗಳಾದ ಸುಗಂಧಿನಿ, ಗೀತಾ, ಇಡ್ಕಿದು ಒಕ್ಕೂಟದ ಅಧ್ಯಕ್ಷ ಜನಾರ್ಧನ ಕುಲಾಲ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕ ಶಿ ವಿಶ್ವನಾಥ, ಸದಸ್ಯರಾದ ಕೆ ಎಸ್ ಪ್ರಕಾಶ್, ಕೋಂಕೋಡಿ ಸುಬ್ರಾಯ ಭಟ್, ಸುರೇಶ್ ಪೂಜಾರಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಮತ್ತು ನವಜೀವನ ಸಮಿತಿಯ ಸದಸ್ಯರು ಪಾಲ್ಗೊಂಡರು.

