ಮೂಡುಬಿದಿರೆ: ಸಂಚಲನ ಮೂಡುಬಿದಿರೆ ಇದರ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಕಾರದೊಂದಿಗೆ ಸ್ವಾಮಿ ವಿವೇಕಾನಂದರ 153ನೇ ಜಯಂತಿ ಪ್ರಯುಕ್ತ ಜನವರಿ 12ರಂದು ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ಅಂತರ್ ಕಾಲೇಜು ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಲಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಪದವಿ, ಪದವಿಪೂರ್ವ ಹಗೂ ವೃತ್ತಿಪರ ಕಾಲೇಜುಗಳು ಈ ಪಂದ್ಯಾಟದಲ್ಲಿ ಭಾಗವಹಿಸಬಹುದಾಗಿದ್ದು ಆಸಕ್ತ ತಂಡಗಳು ಜನವರಿ 5ರ ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸುವಂತೆ ಸಂಘಟನಾ ಸಮಿತಿಯ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ-9480484353ನ್ನು ಸಂಪರ್ಕಿಸಬಹುದು.

