ನವದೆಹಲಿ: ಕರ್ನಾಟಕ ರಾಜ್ಯದಿಂದ ಆಯ್ಕೆಗೊಂಡು  ಕೇಂದ್ರದ ನೂತನ ಸರಕಾರದಲ್ಲಿ ರೈಲ್ವೇ ಸಚಿವರಾಗಿರುವ ಡಿ.ವಿ.ಸದಾನಂದ ಗೌಡ ಅವರು ಜು.8ರಂದು ಮಂಗಳವಾರ  ರೇಲ್ವೇ ಬಜೆಟ್ ಮಂಡಿಸುತ್ತಿದ್ದು, ಎಲ್ಲರ ಕಣ್ಣು ಡಿ.ವಿ.ಸದಾನಂದ ಗೌಡರ ಬಜೆಟ್ ಮೇಲೆ ನೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಚೊಚ್ಚಲ ರೇಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಕೇಂದ್ರ ರೇಲ್ವೆ ಸಚಿವ ಸದಾನಂದಗೌಡ ಅವರು ಲೋಕಸಭೆಯಲ್ಲಿ ಬಜೆಟ್ ಮಂಡಿಸಲಿದ್ದಾರೆ.

ಬಜೆಟ್ ಮಂಡನೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದ ಗೌಡ, ರೈಲುಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಸೂಕ್ರ ಕ್ರಮಕೈಗೊಳ್ಳಲಾಗುವುದು. ಹೀಗಾಗಿ ರೇಲ್ವೆ ಭದ್ರತೆಗೆ ಪ್ರಧಮ ಆದ್ಯತೆ ನೀಡುವುದಾಗಿ ತಿಳಿಸಿದರು . ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯ ಒದಗಿಸುವ ಉದ್ದೇಶ ನಮ್ಮದಾಗಿದ್ದು, ತಕ್‌ತಕ್ಷಣ ಪ್ರಯಾಣಿಕರಿಗೆ ಇದರ ಅನುಕೂಲ ಸಿಗುವುದಿಲ್ಲ ಕ್ರಮೇಣ ಈ ಎಲ್ಲಾ ಸೌಲಭ್ಯಗಳು ಸಿಗಲಿದೆ ಎಂದು ಸದಾನಂದಗೌಡ ಹೇಳಿದ್ದಾರೆ.

By Suddi9

Leave a Reply

Your email address will not be published. Required fields are marked *