ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ವಿಟ್ಲ ಇಲ್ಲಿ ನಡೆದ ಗುರುವಂದನಾ ಸಮಾರಂಭದಲ್ಲಿ ಗುರುವಂದನೆ ಸ್ವೀಕರಿಸಲು ವಿಟ್ಲಕ್ಕೆ ಆಗಮಿಸಿದ ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ| ನಿರ್ಮಲಾನಂದನಾಥ ಮಹಾಸ್ವಾಮೀಜಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಆದಿಚುಂಚನಗಿರಿ ಶಾಖಾಮಠ ಮಂಗಳೂರು ಮಠಾಧಿಪತಿ ಪೂಜ್ಯ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಬಾರತ ಸರ್ಕಾರದ ಕೇಂದ್ರ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ ವಿ ಸದಾನಂದ ಗೌಡ, ವಿಟ್ಲ ಅರಮನೆಯ ಅರಸರಾದ ಜನಾರ್ಧನ ವರ್ಮ ಅರಸರು. ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ಸಂಜೀವ ಮಠಂದೂರು, ಗೌಡರ ಸಂಘದ ಅಧ್ಯಕ್ಷ ಲಿಂಗಪ್ಪ ಗೌಡ ಹಾಗೂ ಇತರರು ಉಪಸ್ಥಿತರಿದ್ದರು.

