ಮೂಡುಬಿದಿರೆ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ  ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರು ಹಾಗೂ ಮೂಡುಬಿದಿರೆ ವಲಯದ ವತಿಯಿಂದ ಜ.24ರಂದು ನಡೆಯುವ `ಶೋಧ 2017’ ದ.ಕ ಜಿಲ್ಲಾ ಶೈಕ್ಷಣಿಕ ಮಹಾಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮೂಡುಬಿದಿರೆ ಸಮಾಜಮಂದಿರದಲ್ಲಿ ಶನಿವಾರ ನಡೆಯಿತು.

patra-bidugade

ಉದ್ಯಮಿ ಶ್ರೀಪತಿ ಭಟ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ, ಶಿಕ್ಷಕರು ಸಮಾಜದಲ್ಲಿ ಸಂಸ್ಕಾರ, ಒಳ್ಳೆಯ ಚಿಂತನೆಯನ್ನು ನೀಡುವವರು. ಅಧುನಿಕ ಶೈಕ್ಷಣಿಕ ವ್ಯವಸ್ಥೆಯಲ್ಲಿ ಬೋಧನೆಯ ಗುಣಮಟ್ಟವನ್ನು ಹೆಚ್ಚಿಸಲು ಶಿಕ್ಷಕರಿಗೆ ಹಾಗೂ ಶಿಕ್ಷಕರ ಅಗಾಧ ಜ್ಞಾನದ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆಯಬೇಕು ಎಂದರು.

ಸಂಘದ ಜಿಲ್ಲಾ ಅಧ್ಯಕ್ಷ ಶಿವಶಂಕರ್ ಭಟ್ ಕೆ. ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಲ್ಲಾರ, ರಾಜ್ಯ ಸಂಘದ ಸದಸ್ಯ ಕೆ.ರಮೇಶ್ ನಾಯಕ್, ಸಂಘದ ಮೂಡುಬಿದಿರೆ ವಲಯ ಅಧ್ಯಕ್ಷ ನಾಗೇಶ್.ಎಸ್, ಪ್ರಧಾನ ಕಾರ್ಯದರ್ಶಿ ಮೆಲ್ವಿನ್ ಅಲ್ಬುಕರ್ಕ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *