ಉಳ್ಳಾಲ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ರಾಜ್ಯ ಉಪಾಧ್ಯಕ್ಷರಾಗಿ ಕೆ.ಎಂ.ಕೆ ಮಂಜನಾಡಿ ನೇಮಕ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೈಸೂರು ವಿಭಾಗದ ಉಪಾಧ್ಯಕ್ಷರಾಗಿ ಶ್ರೀ ಕೆ. ಎಂ. ಕೆ. ಮಂಜನಾಡಿಯವರನ್ನು ನೇಮಕ ಮಾಡಲಾಗಿದೆ.
ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಳ್ಳಾಲದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರುವ ಸಯ್ಯಿದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿರುವ ಶ್ರೀಯುತರು 1987ರಿಂದ ಶಿಕ್ಷಕರ ಸಂಘಟನೆ, ಧಾರ್ಮಿಕ ಸಂಘಟನೆ ಹಾಗೂ ಸಾಮಾಜಿಕ ಸಂಘಟನೆಯಲ್ಲಿ ತೊಡಗಿಸಿ ಕೊಂಡಿರುವರು. ಪ್ರಸಕ್ತ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ, ಮೇವಾದ ಜಿಲ್ಳಾಧ್ಯಕ್ಷ, ಮಂಗಳೂರು ಶಿಕ್ಷಕರ ಸಹಕಾರಿ ಪತ್ತಿನ ಸಂಘದ ಉಪಾಧ್ಯಕ್ಷ, ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಕಾರ್ಯದರ್ಶಿ, ಜಮೀಯತುಲ್ ಫಲಾಹ್ ಮಂಗಳೂರು ತಾಲುಕು ಸಮಿತಿಯ ಪ್ರಧಾನ ಕಾರ್ಯದರ್ಶಿ, ಆಲ್ ಇಂಡಿಯಾ ಐಡಿಯಲ್ ಟೀಚರ್ಸ ಅಸೋಸಿಯೇಷನ್ ಊಳ್ಳಾಲ ವಲಯದ ಕಾರ್ಯ ದರ್ಶಿಯಾಗಿ, ಮಂಜನಾಡಿ ಜಮಾಅತ್ನ ಜತೆ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವರು. ಸಮನ್ವಯ ಮುಸ್ಲಿಂ ಶಿಕ್ಷಕರ ಸಂಘದ ಸ್ಥಾಪಕಾಧ್ಯಕ್ಷರಾಗಿರುವ ಇವರು ಹಲವಾರು ಸಂಘಟನೆಯಲ್ಲಿ ಸಕ್ರೀಯರಾಗಿವರು.

