ಮೂಡುಬಿದಿರೆ: ಮಹಾರಾಷ್ಟ್ರದ ಪುಣೆಯಲ್ಲಿ ಶನಿವಾರ ಮುಕ್ತಾಯಗೊಂಡ ರಾಷ್ಟ್ರೀಯ ಶಾಲಾ ಅಥ್ಲೆಟಿಕ್ಸ್‍ನಲ್ಲಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ಕ್ರೀಡಾಪಟುಗಳು 2 ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.

ashish

ashish-2


pegu

prgu-2

ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾದ ಆಶ್ರಯದಲ್ಲಿ ನಡೆದ ಅಥ್ಲೆಟಿಕ್ಸ್‍ನ 19ವರ್ಷ ವಯೋಮಿತಿಯ ಶಾಟ್‍ಪುಟ್ ಬಾಲಕರ ವಿಭಾಗದಲ್ಲಿ ಆಳ್ವಾಸ್ ಆಶಿಶ್ ಬಲೋಟ್ಯ 17.32 ಮೀ ದೂರ ಎಸೆದು ಚಿನ್ನದ ಪದಕ ಗೆದ್ದುಕೊಂಡರು. ಬಾಲಕಿಯರ ವಿಭಾಗದ ಜಾವಲಿನ್ ಎಸೆತ ವಿಭಾಗದಲ್ಲಿ ಆಳ್ವಾಸ್‍ನ ರುಂಜುನ್ ಪೆಗು 43.26 ಮೀ. ದೂರ ಎಸೆದು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಈ ಇಬ್ಬರು ಕ್ರೀಡಾಪಟುಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉಚಿತ ಶಿಕ್ಷಣ ಯೋಜನೆಯಡಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ಪದಕ ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

By suddi9

Leave a Reply

Your email address will not be published. Required fields are marked *