ವಿಟ್ಲ: ವಿದ್ಯಾರ್ಥಿಗಳು ಸರಕಾರದಿಂದ ದೊರೆಯುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೆಕು’ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಜಯಶ್ರೀ ಕೊಡಂದೂರು ಹೇಳಿದರು. ಅವರು ಪಡಿಬಾಗಿಲಿನ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸೈಕಲ್ ವಿತರಣಾ ಕಾರ್ಯಕ್ರಮದಲ್ಲಿ ಸೈಕಲ್ ವಿತರಿಸಿ ಮಾತಾಡಿದರು.
ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯೆ ಕವಿತಾ ಎಸ್ ನಾಯ್ಕ, ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ ಆಳ್ವ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕಾರಂತ, ಸದಸ್ಯರಾದ ಜಿನಚಂದ್ರ ಜೈನ್ ಮತ್ತು ನರಸಿಂಹ ಬಲ್ಲಾಳ್, ಮುಖ್ಯ ಶಿಕ್ಷಕಿ ಶಶಿಕಲಾ, ಸಹಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.

