ಮೂಡುಬಿದಿರೆ: ಶ್ರೀ ಕ್ಷೇತ್ರ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜ. 14 ರಂದು ಮಾರಿಸಮಾರಾಧನೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಶ್ರೀ ದೇವರಿಗೆ ರಂಗಪೂಜೆ ಮತ್ತು ರಕ್ತೇಶ್ವರೀ ದೈವದ ನರ್ತನ ಸೇವೆ ನಡೆಯಲಿದೆ ಎಂದು ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನದ ಪ್ರಕಟಣೆ ತಿಳಿಸಿದೆ.

