ನವದೆಹಲಿ: ನರೇಂದ್ರ ಮೋದಿ ಪರಮಾಪ್ತ, ಬಿಜೆಪಿಯ ಮಾಸ್ಟರ್ ಮೈಂಡ್ ಅಮಿತ್ ಶಾ ಅವರಿಗೆ ನಿರೀಕ್ಷೆಯಂತೆ ಬಿಜೆಪಿಯ ಅಧ್ಯಕ್ಷ ಪಟ್ಟ ನೀಡಲಾಗಿದೆ. ಈ ವಿಚಾರವನ್ನು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ರಾಜನಾಥ್ ಸಿಂಗ್ ಈ ಬಗ್ಗೆ ಅಧಿಕೃತ ಘೋಷಣೆ ಹೊರಡಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಉತ್ತರಪ್ರದೇಶ ಬಿಜೆಪಿ ಉಸ್ತುವಾರಿ ಹೊತ್ತು ಪಕ್ಷಕ್ಕೆ ಅಭೂತಪೂರ್ವ ಗೆಲುವು ತಂದುಕೊಟ್ಟಿದ್ದ ಅಮಿತ್ ಶಾಗೆ ಈಗ ಇನ್ನಷ್ಟು ಅಗ್ನಿಪರೀಕ್ಷೆಗಳಿವೆ. ಹರಿಯಾಣ, ಜಾರ್ಖಂಡ್ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಧಾನಸಭೆಗೆ ನಡೆಯುವ ಚುನಾವಣೆಗಳಲ್ಲಿ ಬಿಜೆಪಿಯ ಸಾರಥ್ಯವನ್ನು ಅಮಿತ್ ಶಾ ವಹಿಸಿಕೊಳ್ಳಲಿದ್ದಾರೆ. ಈ ರಾಜ್ಯಗಳಲ್ಲೂ ಅಮಿತ್ ಶಾ ಮ್ಯಾಜಿಕ್ ಮಾಡುತ್ತಾರಾ ಎಂದು ಕಾದುನೋಡಬೇಕು.
