ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಬಿಎಸ್‍ಡಬ್ಲ್ಯು ವಿಭಾಗದ ವತಿಯಿಂದ ಆಳ್ವಾಸ್ ರೀಜ್-2017 ರಾಷ್ಟ್ರೀಯ ವಿಚಾರ ಸಂಕಿರಣವು ಜನವರಿ 21, 22ರಂದು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಲಿದೆ.

2

ಮಣಿಪಾಲ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ.ಬಿ.ಎಂ ಹೆಗ್ಡೆ ಜ.20ರಂದು ಬೆಳಗ್ಗೆ 9.30ಕ್ಕೆ ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಉಪಸ್ಥಿತರಿರುವರು.

ಜ.21ರಂದು ಡಾ.ಕುರಿಯನ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಮಂಗಳೂರು ರೋಶನಿ ನಿಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಡೀನ್ ಡಾ.ರಮೀಲಾ ಶೇಖರ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮುಖ್ಯ ಅತಿಥಿಯಾಗಿರುವರು ಎಂದು ಪ್ರಕಟನೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *