ಮೂಡುಬಿದಿರೆ: `ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಗಣಿತಶಾಸ್ತ್ರದ ಉಪಯೋಗಗಳು’ ಎನ್ನುವ ಎರಡು ದಿನಗಳ ಕಾರ್ಯಾಗಾರವನ್ನು ಮಿಜಾರಿನಲ್ಲಿರುವ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.
ಆಳ್ವಾಸ್ ಹೋಮಿಯೋಪತಿ ಕಾಲೇಜಿನ ಪ್ರಾಂಶುಪಾಲ ಡಾ.ಪ್ರವೀಣ್ ರಾಜ್ ಕಾರ್ಯಾಗಾರ ಉದ್ಘಾಟಿಸಿ, ಯಾವುದೇ ಸಂಶೋಧನೆಗೆ ಮೂಲ ಬೇರು. ವೈದ್ಯಕೀಯ, ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಗಣಿತದ ಕೊಡುಗೆ ಗಮನಾರ್ಹ ಎಂದರು. ಎನ್‍ಐಟಿಕೆಯ ಪ್ರಾಧ್ಯಾಪಕ ಡಾ.ಶ್ಯಾಮ್ ಎಸ್ ಕಾಮತ್, ಮಣಿಪಾಲ್ ವಿಶ್ವವಿದ್ಯಾಲಯದ ಡಾ.ವಾದಿರಾಜ ಭಟ್, ಬೆಂಗಳೂರಿನ ಮರ್ಸಿಟಿಸ್ ಬೆಂಜ್‍ನ ಇಂಜಿನಿಯರ್ ಡಾ.ಗಣೇಶ್ ಮೂರ್ತಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದಾರೆ.

ಕಾರ್ಯಕ್ರಮದ ಸಂಯೋಜಕಿ ಹಾಗೂ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಪ್ರಮೀಳಾ ಕೊಂಡೆ ಕಾರ್ಯಾಗಾರ ವಿವರಿಸಿದರು. ಇಂಜಿನಿಯರಿಂಗ್ ಕಾಲೇಜಿನ ಶೈಕ್ಷಣಿಕ ವಿಭಾಗದ ಡೀನ್ ಡಾ.ಬಸವರಾಜು ಉಪಸ್ಥಿತರಿದ್ದರು. ಉಪನ್ಯಾಸಕರಾದ ನಿಶಾಕುಮಾರಿ ಸ್ವಾಗತಿಸಿದರು. ಪ್ರೊ. ಕವಿತಾ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕ ವಸಂತ್ ಕೆ ಆರ್ ಕಾರ್ಯಕ್ರಮ ನಿರೂಪಿಸಿದರು. ರಾಧಿಕಾ ವಂದಿಸಿದರು.

