ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡುವ ಮೂಲಕ ರಾಜ್ಯ ಮಟ್ಟದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಕೀರ್ತಿ ತಂದು ಕೊಟ್ಟ ಇಲ್ಲಿನ ಸಿಬ್ಬಂದಿ ವನಿತಾರವರನ್ನು ರವಿವಾರ ಠಾಣೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

sanmana 1

ಈ ಸಂದರ್ಭದಲ್ಲಿ ಎಸ್ಸೈ ನಂದಕುಮಾರ್ ಎಂ.ಎಂ., ಅಪರಾಧ ವಿಭಾಗದ ಎಸ್ಸೈ ಗಂಗಾದರಪ್ಪ, ಎಎಸ್ಸೈಗಳಾದ ಸಂಜೀವ, ಸೇಶಮ್ಮ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಆರು ತಿಂಗಳ ಹಿಂದೆಯಷ್ಟೇ ಪೊಲೀಸ್ ಇಲಾಖೆಗೆ ಸಿಬ್ಬಂದಿಯಾಗಿ ನೇಮಕಗೊಂಡ ವನಿತಾ, ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ಪಾಲ್ಗೊಂಡು 200 ಮೀ. ಓಟ ಮತ್ತು ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ 100 ಮೀ. ಓಟ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಗೆದ್ದು ಚಾಂಪಿಯನ್‍ಶಿಪ್ ಪಡೆದಿದ್ದರು. ಅಲ್ಲದೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ 100 ಮತ್ತು 200 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ರಿಲೇಯಲ್ಲಿ ದ್ವಿತೀಯ ಸ್ಥಾನ ಗೆದ್ದುಕೊಂಡಿದ್ದಾರೆ.

By suddi9

Leave a Reply

Your email address will not be published. Required fields are marked *