ಕೈಕಂಬ: ಬಂಟ್ವಾಳ ತಾಲೂಕಿನ ಕಳ್ಳಿಗೆ ಓಂ ಫ್ರೆಂಡ್ಸ್ ಕ್ಲಬ್ ಸಂಘದ ನೂತನ ಉದ್ಘಾಟನಾ ಸಮಾರಂಭದಲ್ಲಿ ಭುವನೇಶ್ ಜಯಲಕ್ಷ್ಮೀ ಪಚಿನಡ್ಕ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ರಾಮಕೃಷ್ಣ ತಪೋವನದ ಸ್ವಾಮೀಜಿ ಸ್ವಾಮಿ ವಿವೇಕ ಚೈತನ್ಯಾನಂದ, ಸೇಸಪ್ಪ ಕೋಟ್ಯಾನ್ ಪಚಿನಡ್ಕ, ತುಳು ಚಲನಚಿತ್ರ ಹಾಸ್ಯ ನಟ ಅರವಿಂದ್ ಬೋಳಾರ್, ಸಂಸದ ನಳಿನ್ ಕುಮಾರ್ ಕಟೀಲ್, ರಾಮ್ದಾಸ್ ಬಂಟ್ವಾಳ, ಚಂದ್ರಶೇಖರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

