ವಿಟ್ಲ: ವಿಟ್ಲ ವಿಠಲ ಪ್ರೌಢ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಭಾರತ ಸಂಸ್ಕೃತಿ ಪ್ರತಿಷ್ಠಾನ ಬೆಂಗಳೂರು ಇವರು ಆಯೋಜಿಸಿದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯ ಪ್ರೌಢ ಶಾಲಾ ವಿಭಾಗದಲ್ಲಿ ಜಿಲ್ಲೆಗೆ ಪ್ತಥಮ ಸ್ಥಾನ ಪಡೆದ 9 ನೇ ತರಗತಿ ವಿದ್ಯಾರ್ಥಿ ಚಿನ್ಮಯ ಇವರನ್ನು ಧ್ವಜಾರೋಹಣ ನೆರವೇರಿಸಿದ ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಗೌರವಿಸಿದರು. ಮತ್ತು ಭಾಗವಹಿಸಿದ 50 ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ಈ ಸಂದರ್ಭದಲ್ಲಿ ಸಂಚಾಲಕ ಎಲ್ ಎನ್ ಕೂಡೂರು, ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

13

By suddi9

Leave a Reply

Your email address will not be published. Required fields are marked *